Jeremiah 4:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇದನ್ನು ಈ ಜನಾಂಗಕ್ಕೆ ತಿಳಿಸಿರಿ. ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ. ಬಹುದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ. ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ.
Kannada BSI Bible 2016
ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಜನಾಂಗಗಳಿಗೆ ಅರುಹಿರಿ, ಮುತ್ತುವವರು ದೂರದೇಶದಿಂದ ಯೆರೂಸಲೇವಿುಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿಗೈಯುತ್ತಾರೆ, ಎಂದು ಪ್ರಚುರಪಡಿಸಿರಿ.
Kannada Bible (KNCL) BSI 2016
ಇಗೋ ಅವರು ರಾಷ್ಟ್ರಗಳಿಗೆ ಅರುಹಿಸುವ ಸಮಾಚಾರ: ಮುತ್ತಿಗೆ ಹಾಕುವವರು ದೂರದೇಶದಿಂದ ಜೆರುಸಲೇಮಿಗೆ ಬರುವರು. ಜುದೇಯದ ಪಟ್ಟಣಗಳಿಗೆ ವಿರುದ್ಧ ಘೋಷಣೆಗಳನ್ನು ಪ್ರಕಟಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯಪಡಿಸಿರಿ. ಏನೆಂದರೆ, ‘ಮುತ್ತಿಗೆ ಹಾಕುವ ಸೈನ್ಯದವರು ದೂರದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ಯುದ್ಧದ ಕೂಗನ್ನು ಎಬ್ಬಿಸುತ್ತಾರೆ.