Jeremiah 4:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.
Kannada BSI Bible 2016
ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ; ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.
Kannada Bible (KNCL) BSI 2016
ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”