Jeremiah 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಘ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.
Kannada BSI Bible 2016
ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ.
Kannada Bible (KNCL) BSI 2016
ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.