Jeremiah 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
Kannada BSI Bible 2016
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.
Kannada Bible (KNCL) BSI 2016
ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”