Jeremiah 4:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಭೂಮಿಯ ಕಡೆಗೆ ನೋಡಿದೆ, ಭೂಮಿಯು ಬರಿದಾಗಿತ್ತು. ಭೂಮಿಯ ಮೇಲೇನೂ ಇರಲಿಲ್ಲ. ನಾನು ಆಕಾಶದ ಕಡೆಗೆ ನೋಡಿದೆ, ಅದರ ಬೆಳಕು ಹೋಗಿಬಿಟ್ಟಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.
Kannada BSI Bible 2016
ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು [ದಿವ್ಯಜ್ಞಾನದಿಂದ] ನೋಡಿದೆನು, ಹಾ, ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.
Kannada Bible (KNCL) BSI 2016
ನಾನು ಭೂಮಿಯನ್ನು ನೋಡಿದೆ, ಅದು ಬಿಕೋ ಎನ್ನುತ್ತಿತ್ತು. ಆಕಾಶವನ್ನು ದಿಟ್ಟಿಸಿದೆ, ಅದರಲ್ಲಿ ಬೆಳಕೇ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ, ಹಾಳಾಗಿಯೂ, ಶೂನ್ಯವಾಗಿಯೂ ಇತ್ತು. ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.