Jeremiah 4:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ಇದನ್ನು ಮಾಡಿದನು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.
Kannada BSI Bible 2016
ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನೋಡಲಾಗಿ ಫಲವತ್ತಾದ ಭೂವಿುಯು ಕಾಡಾಗಿತ್ತು. ಅಕಟಾ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದು ಹೋಗಿದ್ದವು.
Kannada Bible (KNCL) BSI 2016
ಇನ್ನೂ ನೋಡಿದೆ - ಸೊಂಪಾದ ನಾಡು ಈಗ ಸುಡುಗಾಡು ಅಕಟಾ! ಸರ್ವೇಶ್ವರನ ಮುಂದೆ, ಅವರ ಕೋಪಾಗ್ನಿಯ ಮುಂದೆ ಊರುಗಳೆಲ್ಲವು ಪಾಳುಬಿದ್ದಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಮರುಭೂಮಿಯಾಯಿತು; ಅದರ ಪಟ್ಟಣಗಳೆಲ್ಲಾ ಯೆಹೋವ ದೇವರ ಮುಂದೆಯೂ, ಅವರ ಉಗ್ರಕೋಪದ ಉರಿಯ ಮುಂದೆಯೂ ಬಿದ್ದು ಹೋಗಿದ್ದವು.