Jeremiah 4:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. ಆಕಾಶವು ಕಪ್ಪಾಗುವುದು. ನಾನು ಹೇಳಿದ್ದೇನೆ, ಅದು ಘದಲಾಗುವುದಿಲ್ಲ. ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಘದಲಾಯಿಸುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.
Kannada BSI Bible 2016
ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.
Kannada Bible (KNCL) BSI 2016
ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ನಿಮಿತ್ತ ಭೂಮಿಯು ದುಃಖಿಸುವುದು. ಮೇಲಿರುವ ಆಕಾಶವು ಕಪ್ಪಾಗುವುದು. ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.”