Jeremiah 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: “ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.
Kannada BSI Bible 2016
ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯೆಹೂದದವರಿಗೂ ಯೆರೂಸಲೇವಿುನವರಿಗೂ ಹೀಗೆ ಹೇಳುತ್ತಾನೆ - ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.
Kannada Bible (KNCL) BSI 2016
ಜುದೇಯದವರಿಗೂ ಜೆರುಸಲೇಮಿನವರಿಗೂ ಸರ್ವೇಶ್ವರ ಹೇಳುವುದೇನೆಂದರೆ - “ಪಾಳುಬಿದ್ದ ನಿಮ್ಮ ಹೊಲಗದ್ದೆಗಳನ್ನು ಉತ್ತು ಹದಮಾಡಿ, ಮುಳ್ಳುಗಳ ನಡುವೆ ಬಿತ್ತಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ಯೆಹೂದದ ಮತ್ತು ಯೆರೂಸಲೇಮಿನ ಜನರಿಗೆ ಹೀಗೆ ಹೇಳುತ್ತಾರೆ: “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಗೆಯ್ಯಿರಿ. ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.