Jeremiah 4:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ‘ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ’ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.
Kannada BSI Bible 2016
ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದಲ್ಲಿ ಸಾರಿರಿ, ಯೆರೂಸಲೇವಿುನೊಳಗೆ ಪ್ರಕಟಿಸಿರಿ; ದೇಶದಲ್ಲೆಲ್ಲಾ ಕೊಂಬೂದುವಂತೆ ಅಪ್ಪಣೆಕೊಡಿರಿ; ಕೂಡಿಕೊಂಡು ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ;
Kannada Bible (KNCL) BSI 2016
ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ.