Jeremiah 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನ ಗುಹೆಯಿಂದ ಒಂದು “ಸಿಂಹವು” ಹೊರಘಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.
Kannada BSI Bible 2016
ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು.
Kannada Bible (KNCL) BSI 2016
ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.