Jeremiah 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.
Kannada BSI Bible 2016
ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರ ನಿವಿುತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಹಲುಬಿ ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.
Kannada Bible (KNCL) BSI 2016
ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.