Jeremiah 4:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಯಾಜಕರು ಭಯಪಡುವರು; ಪ್ರವಾದಿಗಳು ಬೆರಗಾಗುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಅರಸನ ಎದೆಯು ಕುಂದುವದು, ಅಧಿಪತಿಗಳ ಹೃದಯವು ಕುಗ್ಗುವದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೀಗೆಂದರು - “ಆ ದಿನದಂದು ಅರಸರು ಎದೆಗುಂದುವರು, ಅಧಿಪತಿಗಳ ಹೃದಯ ಕುಗ್ಗುವುದು. ಯಾಜಕರು ಸ್ತಬ್ಧರಾಗುವರು; ಪ್ರವಾದಿಗಳು ನಿಬ್ಬೆರಗಾಗುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ, “ಅರಸನ ಹೃದಯವೂ ಎದೆಗುಂದುವುದು. ಅಧಿಪತಿಯ ಹೃದಯವೂ ಕುಗ್ಗುವುದು. ಯಾಜಕರು ಭ್ರಮೆಗೊಳ್ಳುವರು. ಪ್ರವಾದಿಗಳು ಸ್ತಬ್ಧರಾಗುವರು,” ಎಂದು ಯೆಹೋವ ದೇವರು ನುಡಿಯುತ್ತಾರೆ.