Jeremiah 40:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಊಪತಿಯಾದ ನೆಘೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
Kannada BSI Bible 2016
ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇವಿುನವರ ಮತ್ತು ಯೆಹೂದ್ಯರ ಗುಂಪನ್ನು ಬಾಬೆಲಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
Kannada Bible (KNCL) BSI 2016
ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.