Jeremiah 40:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕಾಡುಮೇಡುಗಳಲ್ಲಿದ್ದ ಯೆಹೂದದ ಸೈನ್ಯಾಊಕಾರಿಗಳೂ ಗೆದಲ್ಯನ ಬಳಿಗೆ ಘಂದರು. ಗೆದಲ್ಯನು ಮಿಚ್ಫ ಪಟ್ಟಣದಲ್ಲಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.
Kannada BSI Bible 2016
ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಕಾರೇಹನ ಮಗನಾದ ಯೋಹಾನಾನನೂ ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ವಿುಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋಗಿ -
Kannada Bible (KNCL) BSI 2016
ತರುವಾಯ ಕಾರೇಹನ ಮಗ ಯೋಹಾನಾನನು ಹಾಗು ಕಾಡುಮೇಡುಗಳಲ್ಲಿ ವಾಸಮಾಡುತ್ತಿದ್ದ ಎಲ್ಲ ಸೇನಾಪತಿಗಳು ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,