Jeremiah 40:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಊಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಘಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
Kannada BSI Bible 2016
ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂಬದು ನಿನಗೆ ಗೊತ್ತಿದೆಯೋ ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
Kannada Bible (KNCL) BSI 2016
“ಅಮ್ಮೋನ್ಯರ ಅರಸ ಬಾಲೀಸನು ನಿಮ್ಮನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕಳಿಸಿದ್ದಾನೆ ಎಂಬುದು ನಿಮಗೆ ಗೊತ್ತಿದೆಯೇ?” ಎಂದು ಕೇಳಿದರು. ಆದರೆ ಅಹೀಕಾಮನ ಮಗ ಗೆದಲ್ಯನು ಅವರನ್ನು ನಂಬಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.