Jeremiah 40:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಇಷ್ಮಾಯೇಲನನ್ನು ಕೊಲ್ಲಬೇಡ. ನೀನು ಇಷ್ಮಾಯೇಲನ ಬಗ್ಗೆ ಹೇಳಿದ ಸಂಗತಿಗಳು ನಿಜವಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ - ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಅಹೀಕಾಮನ ಮಗ ಗೆದಲ್ಯನು, “ನೀನು ಹಾಗೆ ಮಾಡಲೆಕೂಡದು. ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು,” ಎಂದು ಉತ್ತರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಹೀಕಾಮನ ಮಗ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಈ ಕೆಲಸ ಮಾಡಬೇಡ, ಏಕೆಂದರೆ ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ,” ಎಂದನು.