Jeremiah 40:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏನೇನು ಮಾಡುವೆನೆಂದು ಯೆಹೋವನು ಹೇಳಿದ್ದನೊ ಅದೆಲ್ಲವನ್ನು ಹೇಳಿದ್ದಂತೆಯೇ ಮಾಡಿದ್ದಾನೆ. ಯೆಹೂದದ ಜನರಾದ ನೀವುಗಳು ಯೆಹೋವನ ವಿರುದ್ಧ ಪಾಪ ಮಾಡಿದ್ದರಿಂದ ಈ ಕೇಡು ಸಂಭವಿಸಿತು. ನೀವು ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.
Kannada BSI Bible 2016
ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.
Kannada Bible (KNCL) BSI 2016
ಆ ಶಾಪ ಈಡೇರುವಂತೆ ಮಾಡಿದ್ದಾನೆ. ನೀವು ಆತನ ವಾಣಿಗೆ ಕಿವಿಗೊಡದೆ ಪಾಪಮಾಡಿದ್ದರಿಂದ ಇದು ನಿಮಗೆ ಸಂಭವಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.