Jeremiah 40:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಊಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಘಂದಲ್ಲಿಗೆ ಹೋಗು.” ತರುವಾಯ ನೆಘೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.
Kannada BSI Bible 2016
ಶೆಕೆಮ್‌ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ - ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.
Kannada Bible (KNCL) BSI 2016
ಯೆರೆಮೀಯನು ಉತ್ತರಕೊಡದೆ ಇರಲು ನೆಬೂಜರದಾನನು ಅವನಿಗೆ, “ಬಾಬಿಲೋನಿಯದ ಅರಸನು, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಜುದೇಯದ ನಗರಗಳಿಗೆ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆ. ಅವನ ಬಳಿಗೆ ಹೋಗು, ಅವನ ಹತ್ತಿರ ಜನರ ನಡುವೆ ವಾಸಮಾಡುವ ಇಲ್ಲವೆ ಎಲ್ಲಿಗೆ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.