Jeremiah 40:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಘಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.
Kannada BSI Bible 2016
ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೇನಾಪತಿಗಳು ಯಾರಂದರೆ - ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು, ಇವರೇ.
Kannada Bible (KNCL) BSI 2016
ಹೀಗೆ ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ ನೆಟೋಫದವನಾದ ಏಫಯನ ಮಕ್ಕಳು ಗೆದಲ್ಯನ ಬಳಿಗೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.