Jeremiah 40:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.
Kannada BSI Bible 2016
ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ - ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು.
Kannada Bible (KNCL) BSI 2016
ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.