Jeremiah 41:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಘಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಊಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.
Kannada BSI Bible 2016
ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ವಿುಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.
Kannada Bible (KNCL) BSI 2016
ಏಳನೆಯ ತಿಂಗಳಿನಲ್ಲಿ ಇಷ್ಮಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು. ಈತನು ರಾಜವಂಶದವನು, ಎಲೀಷಾಮನ ಮೊಮ್ಮಗನು, ನೆತನ್ಯನ ಮಗನು ಹಾಗು ಅರಸನ ಪದಾಧಿಕಾರಿಗಳಲ್ಲಿ ಒಬ್ಬನು. ಅಲ್ಲಿ ಗೆದಲ್ಯನೊಂದಿಗೆ ಅವರೆಲ್ಲರು ಊಟಮಾಡುತ್ತಿದ್ದಾಗ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,