Jeremiah 41:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಘೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಘೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಊಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಪದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.
Kannada BSI Bible 2016
ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿದ ವಿುಚ್ಪದ ಜನಶೇಷವನ್ನು, ಅಂತು ವಿುಚ್ಪದಲ್ಲಿ ಉಳಿದವರೆಲ್ಲರನ್ನೂ ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.
Kannada Bible (KNCL) BSI 2016
ಬಳಿಕ ನೆತನ್ಯನ ಮಗ ಇಷ್ಮಾಯೇಲನು ರಾಜಕುವರಿಯರನ್ನು ಮತ್ತು ರಕ್ಷಾದಳದ ನಾಯಕನಾದ ನೆಬೂಜರದಾನನನ್ನು ಆಹೀಕಾಮನ ಮಗ ಗೆದಲ್ಯನಿಗೆ ಒಪ್ಪಿಸಿದ್ದ ಮಿಚ್ಪದ ಜನ ಶೇಷವನ್ನು, ಹೀಗೆ ಮಿಚ್ಪದಲ್ಲಿ ಅಳಿದುಳಿದಿದ್ದ ಎಲ್ಲರನ್ನು ಸೆರೆಹಿಡಿದು ಅಮ್ಮೋನ್ಯರ ನಾಡಿಗೆ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.