Jeremiah 41:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಷ್ಮಾಯೇಲನು ಈ ಎಂಭತ್ತು ಜನರನ್ನು ಕಾಣುವದಕ್ಕಾಗಿ ಮಿಚ್ಫ ಪಟ್ಟಣದ ಹೊರಗಡೆ ಹೋದನು. ಅವರನ್ನು ಕಾಣುವದಕ್ಕೆ ಹೋಗುವಾಗ ಅವನು ಅಳುತ್ತಿದ್ದನು. ಇಷ್ಮಾಯೇಲನು ಆ ಎಂಭತ್ತು ಜನರನ್ನು ಎದುರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನನ್ನು ಭೇಟಿ ಮಾಡುವದಕ್ಕೆ ನನ್ನೊಂದಿಗೆ ಬನ್ನಿ” ಎಂದು ಕರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ” ಎಂದು ಹೇಳಿದನು.
Kannada BSI Bible 2016
ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೆತನ್ಯನ ಮಗನಾದ ಇಷ್ಮಾಯೇಲನು ವಿುಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದುರುಗೊಂಡು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ ಎಂದು ಹೇಳಿದನು.
Kannada Bible (KNCL) BSI 2016
ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದುಬಂದನು. ಅವರನ್ನು ಎದುರುಗೊಂಡು, ‘ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ’ ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು. ಅವರನ್ನು ಎದುರುಗೊಂಡ ಮೇಲೆ ಅವರಿಗೆ, “ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ,” ಎಂದನು.