Jeremiah 42:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ದಯೆತೋರುತ್ತೇನೆ. ಬಾಬಿಲೋನಿನ ರಾಜನು ಸಹ ನಿಮಗೆ ದಯೆತೋರುವನು. ಅವನು ನಿಮ್ಮನ್ನು ನಿಮ್ಮ ದೇಶಕ್ಕೆ ಮರಳಿ ತರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು’ ಎಂದೆನು.
Kannada BSI Bible 2016
ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗಗೊಡಿಸುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು.
Kannada Bible (KNCL) BSI 2016
ನಾನು ನಿಮಗೆ ಕರುಣೆತೋರಿಸುವೆನು. ಅವನು ನಿಮ್ಮ ಮೇಲೆ ಮನಮರುಗಿ ಸ್ವಂತ ನಾಡಿಗೆ ಹೋಗಲುಬಿಡುವಂತೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ನಿಮ್ಮನ್ನು ಕರುಣಿಸಿ, ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡುವನು.’