Jeremiah 42:16 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಘಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನು ಹತ್ತುವದು; ಅಲ್ಲೇ ಸಾಯುವಿರಿ.
Kannada Bible (KNCL) BSI 2016
ನೀವು ಹೆದರುತ್ತಿರುವ ಖಡ್ಗ, ಈಜಿಪ್ಟಿನಲ್ಲೂ ನಿಮ್ಮನ್ನು ಹಿಂದಟ್ಟಿ ಬಂದು ಹಿಡಿಯುವುದು. ನೀವು ಅಂಜುತ್ತಿರುವ ಕ್ಷಾಮ ಅಲ್ಲಿಯೂ ನಿಮ್ಮ ಬೆನ್ನು ಹತ್ತುವುದು. ನೀವು ಅಲ್ಲೇ ಸಾಯುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಭಯಪಡುವ ಖಡ್ಗವು ಈಜಿಪ್ಟ್ ದೇಶದಲ್ಲಿ ನಿಮ್ಮನ್ನು ಹಿಡಿಯುವುದು. ನೀವು ಹೆದರಿಕೊಳ್ಳುವ ಕ್ಷಾಮವು ಈಜಿಪ್ಟ್ ದೇಶಕ್ಕೆ ನಿಮ್ಮನ್ನು ಹಿಂದಟ್ಟುವುದು, ನೀವು ಅಲ್ಲೇ ಸಾಯುವಿರಿ.