Jeremiah 42:17 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿಗೆ ಹೋಗಿ ಅಲ್ಲಿ ನೆಲೆಸಙೇಕೆಂದು ನಿಶ್ಚಯಿಸಿದವರೆಲ್ಲರೂ ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರ ವ್ಯಾಊಯಿಂದಾಗಲಿ ಸತ್ತುಹೋಗುವರು. ಈಜಿಪ್ಟಿಗೆ ಹೋದವರಲ್ಲಿ ಒಬ್ಬನೂ ಬಂದುಕಿರಲಾರ. ನಾನು ಅವರಿಗೆ ಉಂಟುಮಾಡುವ ಪೀಡೆಯಿಂದ ಒಬ್ಬನೂ ತಪ್ಪಿಸಿಕೊಳ್ಳಲಾರ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವದು; ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವರು; ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.
Kannada Bible (KNCL) BSI 2016
ಈಜಿಪ್ಟಿಗೆ ಹೋಗಿ ಅಲ್ಲೆ ವಾಸಿಸಲು ಹಟಹಿಡಿಯುವ ಎಲ್ಲ ಜನರಿಗೂ ಇದೇ ಗತಿಯಾಗುವುದು. ಖಡ್ಗ-ಕ್ಷಾಮ-ವ್ಯಾಧಿಯಿಂದ ಅವರು ಸಾಯುವರು. ನಾನು ಬರಮಾಡುವ ವಿಪತ್ತಿನಿಂದ ಅವರಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿಗೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನಿಡುವ ಮನುಷ್ಯರಿಗೆಲ್ಲಾ ಹೀಗಾಗುವುದು. ಅವರು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವರು. ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವುದಿಲ್ಲ.’