Jeremiah 42:19 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಬೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನೆಐಚ್ಚರಿಕೆಯನ್ನು ಕೊಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.
Kannada Bible (KNCL) BSI 2016
“ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೂದದ ಶೇಷವೇ, ಯೆಹೋವ ದೇವರು ನಿಮ್ಮ ವಿಷಯವಾಗಿ ಹೇಳಿದ್ದೇನೆಂದರೆ: ‘ಈಜಿಪ್ಟಿಗೆ ಹೋಗಬೇಡಿರಿ,’ ಇದನ್ನು ಖಚಿತಪಡಿಸಿಕೊಳ್ಳಿ: ನಾನು ಇಂದು ನಿಮಗೆ ಎಚ್ಚರಿಕೆ ನೀಡುತ್ತೇನೆ.