Jeremiah 42:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಘಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಘಹಳ ಜನರಿದ್ದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.
Kannada BSI Bible 2016
ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದು ಅವನಿಗೆ - ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು;
Kannada Bible (KNCL) BSI 2016
“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,