Jeremiah 42:20 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಙೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು - ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು ಎಂಬದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
Kannada Bible (KNCL) BSI 2016
ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ.