Jeremiah 42:21 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಂದು, ನಾನು ನಿಮಗೆ ಯೆಹೋವನ ಸಂದೇಶವನ್ನು ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ನನ್ನ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನ್ನೂ ನೀವು ಕೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯೆಹೋವನ ಅಪ್ಪಣೆಯನ್ನು ಈ ದಿವಸ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.
Kannada Bible (KNCL) BSI 2016
ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ.