Jeremiah 42:22 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಙೇಕೆನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಊಯಿಂದಾದರೂ ಸಾಯುವಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯಾವ ಸ್ಥಳದಲ್ಲಿ ವಾಸಮಾಡಲಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತ ತಿಳಿಯಿರಿ.
Kannada Bible (KNCL) BSI 2016
ನೀವು ಯಾವ ನಾಡಿನಲ್ಲಿ ವಾಸಮಾಡಲು ಬಯಸಿ ಹೋಗುತ್ತೀರೋ ಆ ನಾಡಿನಲ್ಲಿ ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವಿರಿ. ಇದು ನಿಶ್ಚಯ ಎಂದು ತಿಳಿಯಿರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.