Jeremiah 42:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನೇ, ನಾವು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ಎಂಬುದನ್ನು ಹೇಳಙೇಕೆಂದು ನಿನ್ನ ದೇವರನ್ನು ಪ್ರಾರ್ಥಿಸು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ, ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ವಿಜ್ಞಾಪಿಸಿದರು.
Kannada BSI Bible 2016
ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ, ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ ಎಂದು ವಿಜ್ಞಾಪಿಸಿದರು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಾವು ನಡೆಯಬೇಕಾದ ಮಾರ್ಗವನ್ನೂ ಕೈಗೊಳ್ಳಬೇಕಾದ ಕಾರ್ಯವನ್ನೂ ತೋರಿಸುವಂತೆ ನಮಗಾಗಿ ಪ್ರಾರ್ಥಿಸಬೇಕು. ಅಳಿದುಳಿದಿರುವ ಈ ಎಲ್ಲ ಜನರಿಗಾಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪ್ರಾರ್ಥಿಸಬೇಕು. ನಿಮ್ಮ ಕಣ್ಣಿಗೆ ಕಾಣುವಂತೆ ಹೇರಳವಾದ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ,” ಎಂದು ವಿಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ನಡೆಯತಕ್ಕ ಮಾರ್ಗವನ್ನೂ, ನಾವು ಮಾಡತಕ್ಕ ಕಾರ್ಯವನ್ನೂ ನಿನ್ನ ದೇವರಾದ ಯೆಹೋವ ದೇವರು ನಮಗೆ ತಿಳಿಸುವ ಹಾಗೆ, ನಿನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡು,” ಎಂದರು.