Jeremiah 42:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವರು, “ನಿನ್ನ ದೇವರಾದ ಯೆಹೋವನು ಹೇಳಿದ ಎಲ್ಲವನ್ನು ನಾವು ಮಾಡದಿದ್ದಲ್ಲಿ ಯೆಹೋವನು ಸಬತಃ ನಮ್ಮ ವಿರುದ್ಧ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಲ್ಲಲಿ. ನಾವು ಏನು ಮಾಡಙೇಕೆಂಬುದನ್ನು ತಿಳಿಸಲು ನಿನ್ನ ದೇವರಾದ ಯೆಹೋವನು ನಿನ್ನನ್ನು ಕಳುಹಿಸುತ್ತಾನೆಂದು ನಾವು ಘಲ್ಲೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!
Kannada BSI Bible 2016
ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆರೆಮೀಯನಿಗೆ - ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!
Kannada Bible (KNCL) BSI 2016
ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾರೋ, ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ, ಯೆಹೋವ ದೇವರು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳುವಾಗ, ನಮಗೆ ಒಳ್ಳೆಯದಾಗುವ ಹಾಗೆ,