Jeremiah 43:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಘೂಕದೆಐಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಙೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಙೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಙೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.
Kannada BSI Bible 2016
ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಂದು ಐಗುಪ್ತದೇಶವನ್ನು ಹೊಡೆಯುವನು; ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.
Kannada Bible (KNCL) BSI 2016
ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಂದು ಈಜಿಪ್ಟ್ ದೇಶವನ್ನು ಹೊಡೆದು, ಮರಣಕ್ಕೆ ಇರುವವರನ್ನು ಮರಣಕ್ಕೂ, ಸೆರೆಗೆ ಇರುವವರನ್ನು ಸೆರೆಗೂ, ಖಡ್ಗಕ್ಕೆ ಇರುವವರನ್ನು ಖಡ್ಗಕ್ಕೂ ಒಪ್ಪಿಸುವನು.