Jeremiah 43:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಘೂಕದೆಐಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಘನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸಬಚ್ಛಗೊಳಿಸುವಂತೆ ನೆಘೂಕದೆಐಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.
Kannada BSI Bible 2016
ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.
Kannada Bible (KNCL) BSI 2016
ಅವನು ಈಜಿಪ್ಟಿನ ದೇವತೆಗಳ ಆಲಯಗಳಿಗೆ ಬೆಂಕಿ ಹೊತ್ತಿಸುವನು. ಅವುಗಳನ್ನು ಸುಟ್ಟು ಆ ದೇವತೆಗಳನ್ನು ಸೆರೆಗೊಯ್ಯುವನು. ಕುರುಬನು ತನ್ನ ಕಂಬಳಿಯನ್ನು ಸೋಸುವಂತೆ ಅವನು ಈಜಿಪ್ಟನ್ನು ಸೋಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈಜಿಪ್ಟ್ ದೇವರುಗಳ ಆಲಯಗಳಲ್ಲಿ ಬೆಂಕಿ ಹಚ್ಚುವೆನು. ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು. ಕುರುಬನು ತನ್ನ ಉಡುಪನ್ನು ಹೇನುಗಳಿಂದ ಶುದ್ಧೀಕರಿಸುವಂತೆ ಅವನು ಈಜಿಪ್ಟ್ ದೇಶವನ್ನು ಶುದ್ಧವಾಗಿಸಿಕೊಂಡು ಅಲ್ಲಿಂದ ಸಮಾಧಾನವಾಗಿ ಹೊರಟು ಹೋಗುತ್ತಾನೆ.