Jeremiah 43:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.
Kannada BSI Bible 2016
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ;
Kannada Bible (KNCL) BSI 2016
ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಗರ್ವಿಷ್ಠ ಮನುಷ್ಯರೆಲ್ಲರೂ ಮಾತನಾಡಿ ಯೆರೆಮೀಯನಿಗೆ, “ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾಗಿರುವುದಕ್ಕೆ ಈಜಿಪ್ಟಿಗೆ ಹೋಗಬಾರದೆಂದು ಹೇಳುವುದಕ್ಕೆ ನಮ್ಮ ದೇವರಾದ ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ.