Jeremiah 43:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಬಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಬುದು ನಮ್ಮ ಆಲೋಚನೆ. ಅವನು ನಮ್ಮನ್ನು ಬಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಬಯಸುತ್ತಾನೆ ಅಥವಾ ಅವರು ನಮ್ಮನ್ನು ಸೆರೆಹಿಡಿದು ಬಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಬಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಸ್ದೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬಿಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ” ಎಂದು ಹೇಳಿದರು.
Kannada BSI Bible 2016
ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಸ್ದೀಯರು ನಮ್ಮನ್ನು ಕೊಲ್ಲುವದಕ್ಕೋ ಬಾಬೆಲಿಗೆ ಸೆರೆ ಒಯ್ಯುವದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ ಎಂದು ಹೇಳಿದರು.
Kannada Bible (KNCL) BSI 2016
ಬದಲಿಗೆ ಬಾಬಿಲೋನಿಯರು ನಮ್ಮನ್ನು ಕೊಲ್ಲಲಿ ಅಥವಾ ಸೆರೆಗೊಯ್ಯಲಿ ಎಂದು ನಮ್ಮನ್ನು ಅವರ ಕೈಗೆ ಸಿಕ್ಕಿಸುವುದಕ್ಕಾಗಿ ನೇರೀಯನ ಮಗ ಬಾರೂಕನೇ ನಿನ್ನನ್ನು ನಮ್ಮ ಮೇಲೆ ದೊಬ್ಬಿದ್ದಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ನಮ್ಮನ್ನು ಕೊಂದುಹಾಕುವ ಹಾಗೆಯೂ, ನಮ್ಮನ್ನು ಬಾಬಿಲೋನಿಗೆ ಸೆರೆ ಒಯ್ಯುವ ಹಾಗೆಯೂ, ನಮ್ಮನ್ನು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರೇಪಿಸಿದ್ದಾನೆ,” ಎಂದರು.