Jeremiah 44:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
Kannada BSI Bible 2016
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶದ ವಿುಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -
Kannada Bible (KNCL) BSI 2016
ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟ್ ದೇಶದ ಕೆಳಗಿನ ಪ್ರಾಂತದ ಮಿಗ್ದೋಲ್, ತಹಪನೇಸ್, ಮೆಂಫೀಸ್ ಪಟ್ಟಣಗಳಲ್ಲಿಯೂ ಹಾಗೂ ಈಜಿಪ್ಟನ ದಕ್ಷಿಣ ಭಾಗವಾದ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆಮೀಯನಿಗೆ ಬಂದ ವಾಕ್ಯವು: