Jeremiah 44:10 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ನಿಮ್ಮ ಪಿತೃಗಳಿಗೂ ನೇವಿುಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.
Kannada Bible (KNCL) BSI 2016
ಅವರು ಇಂದಿನವರೆಗೂ ಪಶ್ಚಾತ್ತಾಪಪಡಲಿಲ್ಲ. ನನಗೆ ಭಯಪಡಲಿಲ್ಲ. ನಿಮಗೂ ನಿಮ್ಮ ಪೂರ್ವಜರಿಗೂ ನಾನು ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲಿಲ್ಲ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ.