Jeremiah 44:11 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಙೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.
Kannada Bible (KNCL) BSI 2016
“ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನ ಮೇಲೆ ವಿಪತ್ತನ್ನು ಬರಮಾಡಲು ಮತ್ತು ಎಲ್ಲಾ ಯೆಹೂದವನ್ನು ನಾಶಮಾಡಲು ನಿರ್ಧರಿಸಿದ್ದೇನೆ.