Jeremiah 44:14 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸಬಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದಜನಶೇಷದವರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವದಿಲ್ಲ; ಓಡಿಬರುವ ಕೊಂಚ ಜನವೇ ಹೊರತು ಯಾವನೂ ಹಿಂದಿರುಗನು.
Kannada Bible (KNCL) BSI 2016
ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.