Jeremiah 44:19 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಹೆಂಗಸರು ಮಾತನಾಡಿದರು. ಅವರು ಯೆರೆಮೀಯನಿಗೆ ಹೀಗೆ ಹೇಳಿದರು, “ನಾವು ಏನು ಮಾಡುತ್ತಿದ್ದೆವೆಂಬುದು ನಮ್ಮ ಗಂಡಂದಿರಿಗೆ ಗೊತ್ತಿತ್ತು. ಸಬರ್ಗದ ರಾಣಿಗೆ ನೈವೇದ್ಯವನ್ನು ಮಾಡುವದಕ್ಕೆ ನಾವು ಅವರ ಅಪ್ಪಣೆಯನ್ನು ಪಡೆದಿದ್ದೆವು. ಅವಳಿಗೆ ಪಾನನೈವೇದ್ಯವನ್ನು ಮಾಡುವದಕ್ಕೂ ಅವರ ಅಪ್ಪಣೆಯನ್ನು ಪಡೆದಿದ್ದೆವು. ನಾವು ಅವಳ ಆಕಾರದ ಹೋಳಿಗೆಯನ್ನು ಮಾಡುತ್ತಿದ್ದೆವೆಂಬುದೂ ನಮ್ಮ ಗಂಡಂದಿರಿಗೆ ಗೊತ್ತಿತ್ತು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?
Kannada Bible (KNCL) BSI 2016
ಮಹಿಳೆಯರು, “ಗಗನದೊಡತಿಗೆ ಧೂಪಾರತಿ ಎತ್ತಿ, ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರದಂಥ ಹೋಳಿಗೆಗಳನ್ನು ಮಾಡಿ ಪಾನದ್ರವ್ಶವನ್ನು ಅರ್ಪಿಸುತ್ತಿದ್ದುದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೆ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, “ನಾವು ಗಗನದ ಒಡತಿಗೆ ಧೂಪ ಸುಟ್ಟು, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ದಾಗ, ನಮ್ಮ ಗಂಡಂದಿರನ್ನು ಬಿಟ್ಟು, ಅವಳ ಪೂಜೆಗೋಸ್ಕರ ದೋಸೆಗಳನ್ನು ಮಾಡಿ, ಅವಳಿಗೆ ಪಾನಾರ್ಪಣೆಗಳನ್ನು ಅರ್ಪಿಸಿದೆವೋ?” ಎಂದರು.