Jeremiah 44:22 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಇನ್ನು ಮುಂದೆ ತಾಳ್ಮೆಯಿಂದ ಇರಲಾರನು. ನೀವು ಮಾಡಿದ ಅಸಹ್ಯಕೃತ್ಯಗಳನ್ನು ಯೆಹೋವನು ದೆಬಷೀಸುತ್ತಾನೆ. ಆದ್ದರಿಂದ ಆತನು ನಿಮ್ಮ ದೇಶವನ್ನು ಬರಿದಾದ ಮರುಭೂಮಿಯನ್ನಾಗಿ ಮಾಡಿದ್ದಾನೆ, ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಬೇರೆಯವರು ಆ ದೇಶದ ಬಗ್ಗೆ ಕೆಟ್ಟ ಮಾತುಗಳನ್ನಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಡಿಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ಬೆರಗಿಗೂ ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.
Kannada Bible (KNCL) BSI 2016
ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.