Jeremiah 44:25 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ಸ್ತ್ರೀಯರೇ ‘ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನ್ನು ಈಡೇರಿಸುವೆವು. ನಾವು ಸಬರ್ಗದ ರಾಣಿಗೆ ನೈವೇದ್ಯವನ್ನು ಮತ್ತು ಪಾನನೈವೇದ್ಯವನ್ನು ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು’ ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನ್ನು ಪೂರ್ಣಗೊಳಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬದಾಗಿ ನೀವೂ ನಿಮ್ಮ ಹೆಂಡಿರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ತೀರಿಸೇ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೂ, ನಿಮ್ಮ ಹೆಂಡತಿಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವೆವೆಂದೂ, ನಿಮ್ಮ ಬಾಯಿಗಳಿಂದ ಹೇಳಿ ನಿಮ್ಮ ಕೈಗಳಿಂದ ಸಹ ಈಡೇರಿಸಿದ್ದೀರಿ.’ “ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವಿರಿ.