Jeremiah 44:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಘಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಘಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.
Kannada BSI Bible 2016
ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಅಲ್ಲಿನವರು ತಮಗೂ ನಿಮಗೂ ನಿಮ್ಮ ಪಿತೃಗಳಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡಿಸಿದ್ದರಿಂದ ಆ ಸ್ಥಳಗಳು ಹಾಳಾದವು. ಅಲ್ಲಿ ಯಾರೂ ವಾಸಿಸರು.
Kannada Bible (KNCL) BSI 2016
ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.