Jeremiah 44:30 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಘೂಕದೆಐಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇನಂದರೆ - ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು ಎಂಬದೇ; ಇದು ಯೆಹೋವನಾದ ನನ್ನ ನುಡಿ.
Kannada Bible (KNCL) BSI 2016
ಆ ಗುರುತು ಯಾವುದೆಂದರೆ: ಇಗೋ ಜುದೇಯದ ಅರಸ ಚಿದ್ಕೀಯನನ್ನು ಅವನ ಪ್ರಾಣ ಶತ್ರುವಾದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈ಼ಗೆ ಒಪ್ಪಿಸಿದಂತೆ ಈಜಿಪ್ಟಿನ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಒಪ್ಪಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’ ”