Jeremiah 44:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದೆಬಷೀಸುತ್ತೇನೆ’ ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,
Kannada BSI Bible 2016
ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಾ - ಅಹಹ, ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ ಎಂದು ಪ್ರಕಟಿಸುತ್ತಾ ಬಂದರೂ ಅವರು ಕಿವಿಗೊಟ್ಟು ಕೇಳಲಿಲ್ಲ,
Kannada Bible (KNCL) BSI 2016
ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.