Jeremiah 45:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ‘ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಎಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
Kannada BSI Bible 2016
ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಈ ವಾಕ್ಯವನ್ನು ಕೇಳು - ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
Kannada Bible (KNCL) BSI 2016
“ಸರ್ವೇಶ್ವರನ ಈ ವಾಣಿಯನ್ನು ಕೇಳು: ‘ನೋಡು, ನಾನು ಕಟ್ಟಿದ್ದನ್ನು ನಾನೇ ಕೆಡವುತ್ತೇನೆ. ನಾನು ನೆಟ್ಟಿದ್ದನ್ನು ನಾನೇ ಕಿತ್ತುಹಾಕುತ್ತೇನೆ. ಹೌದು ಜಗದಲ್ಲೆಲ್ಲ ಹಾಗೆ ಮಾಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿಮಗೆ ಹೇಳಲು ಯೆಹೋವ ದೇವರು ನನಗೆ ಹೇಳಿದ್ದಾರೆ. ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ. ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.