Jeremiah 45:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಙೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಙೇಕಾಗಘಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”
Kannada BSI Bible 2016
ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನುಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಬಾಚಿಕೊಂಡುಹೋಗುವದಕ್ಕೆ ನಿನಗೆ ಅವಕಾಶಕೊಡುವೆನು. ಇದು ಯೆಹೋವನಾದ ನನ್ನ ನುಡಿ.
Kannada Bible (KNCL) BSI 2016
ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.”