Jeremiah 46:16 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೈನಿಕರು ಮತ್ತೆಮತ್ತೆ ಎಡವುತ್ತಾರೆ. ಅವರು ಒಬ್ಬರಮೇಲೊಬ್ಬರು ಬೀಳುವರು. ‘ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನ್ನು ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಬೇಕು’ ಎಂದು ಅವರು ಹೇಳಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; ‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ತಗಲಿ ಬಿದ್ದರು; ನಾವು ಎದ್ದು ಜನ್ಮಭೂವಿುಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ ಎಂದುಕೊಂಡರು.
Kannada Bible (KNCL) BSI 2016
ಬಹುಜನರು ಮುಗ್ಗರಿಸಿ ಬಿದ್ದರು ಹೌದು, ಒಬ್ಬರಿಗೊಬ್ಬರು ತಾಕಿ ಬಿದ್ದರು. ‘ಎದ್ದು ಜನ್ಮಭೂಮಿಗೆ ತೆರಳೋಣ ಸ್ವಜನರನ್ನು ಸೇರಿಕೊಳ್ಳೋಣ ಸಂಹರಿಸುವ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪದೇಪದೇ ಎಡವುತ್ತಾರೆ. ಹೌದು, ಒಬ್ಬರ ಮೇಲೊಬ್ಬರು ಬಿದ್ದರು. ‘ಅವರು ಉಪದ್ರವ ಪಡಿಸುವವರ ಖಡ್ಗವನ್ನು ಬಿಟ್ಟು, ಸ್ವಂತ ಜನರ ಬಳಿಗೂ, ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ,’ ಎಂದು ಹೇಳಿದರು.